ಚಿಕ್ಕಬಳ್ಳಾಪುರ: ತಂದೆ ಸಾವಿನಿಂದ ಮನನೊಂದ ಪುತ್ರಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಗೌರಿಬಿದನೂರು ನಗರದ ನಾಗಿರೆಡ್ಡಿ ಬಡಾವಣೆ 22 ವರ್ಷದ ಸ್ವರ್ಣ ಮೃತಪಟ್ಟವರು. ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ಓದುತ್ತಿದ್ದ ಸ್ವರ್ಣ ಕಾಲೇಜಿನ ಹಾಸ್ಟೆಲ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಲ್ಲಿಂದ ಮನೆಗೆ ಬಂದಿದ್ದ ಅವರನ್ನು ತಾಯಿ ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿ ಫಲಕಾರಿಯಾಗದೆ ಸ್ವರ್ಣ ಮೃತಪಟ್ಟಿದ್ದಾರೆ.
ಆಕೆಯ ತಂದೆ ಮೂರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಅಂದಿನಿಂದ ಮಾನಸಿಕವಾಗಿ ಕುಗ್ಗಿದ್ದ ಸ್ವರ್ಣ ಮಾನಸಿಕ ಖಿನ್ನತೆಗೆ ಒಳಗಾಗಿ ತಂದೆಯ ದಾರಿ ಹಿಡಿದಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಸ್ವರ್ಣ ತಾಯಿಯ ಬಳಿ ಹೇಳಿಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.