ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಆದರೆ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಆರಂಭವಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುತ್ತಿದ್ದು, ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೊನ್ನಾವರದಲ್ಲಿ 37.6 ಡಿಗ್ರಿ ಸೆಲ್ಸಿಯಲ್ ಗರಿಷ್ಠ ಉಷ್ಣಾಂಶ , ಚಾಮರಾಜನಗರ ಜಿಲ್ಲೆಯಲ್ಲಿ 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉಳಿದಂತೆ ಬೆಳಗಾವಿ, ಬೀದರ್, ವಿಜಯಪುರ, ರಾಯಚೂರು, ಯಾದಗಿರಿ, ಧಾರವಾಡ, ಕಲಬುರಗಿ, ಕೊಪ್ಪಳ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಶಿವಮೊಗ್ಗ. ಮೈಸೂರು , ಬೆಂಗಳೂರು ಜಿಲ್ಲೆಗಳಲ್ಲಿ ಶುಭ್ರ ವಾತಾವರಣವಿರಲಿದ್ದು, ಬೆಂಗಳೂರಿನಲ್ಲಿ 31.6 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.