ಸ್ವರ್ಗಕ್ಕೆ ಹೋಗ ಬಯಸುವ ಎಲ್ಲರೂ ಸಂಸ್ಕೃತ ಕಲಿಯಬೇಕು: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

ಉಡುಪಿ: ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸ್ವರ್ಗಕ್ಕೆ ಹೋಗಬಯಸುವ ಎಲ್ಲರೂ ಸಂಸ್ಕೃತ ಭಾಷೆ ಕಲಿಯಬೇಕು ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ವತಿಯಿಂದ ರಾಜಾಂಗಣದಲ್ಲಿ ನಡೆದ ಶ್ರೀ ಕೃಷ್ಣ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಸ್ವಾಮೀಜಿ ಮಾತನಾಡಿ, ಸಂಸ್ಕೃತ ಪವಿತ್ರ ಪಾವನ ಶ್ರೇಷ್ಠವಾಗಿರುವ ಭಾಷೆ ಎಂದು ಹೇಳಿದ್ದಾರೆ.

ಸರಳ, ಸುಂದರ, ಸುಲಭವಾದ ಸಂಸ್ಕೃತ ಭಾಷೆ ವಿಶ್ವ ಭಾಷೆ ಮತ್ತು ದೇವ ಭಾಷೆಯಾಗಿದೆ. ಎಲ್ಲಾ ಭಾಷೆಗಳ ಮೂಲ ಸಂಸ್ಕೃತವಾಗಿದ್ದು, ಭಾರತೀಯ ಭಾಷೆಗಳು ಮಾತ್ರವಲ್ಲದೇ ಆಂಗ್ಲ ಭಾಷೆಯ ಮೂಲವೂ ಸಂಸ್ಕೃತವಾಗಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇರಳ ರಾಜ್ಯಪಾಲ ಆರಿಫ್ ಖಾನ್ ಮಾತನಾಡಿ, ದೇವರಿಗೆ ಯಾವ ಭಾಷೆಯಲ್ಲಿ ಪ್ರಾರ್ಥಿಸುತ್ತೇವೆ ಎನ್ನುವುದಕ್ಕಿಂತ ಯಾವ ಭಾವದಲ್ಲಿ ಪ್ರಾರ್ಥಿಸುತ್ತೇವೆ ಎನ್ನುವದು ಮುಖ್ಯ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷ ಡಾ. ಹೆಚ್.ಎಸ್. ಬಲ್ಲಾಳ್ ಮೊದಲಾದವರಿದ್ದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read