HomeLatest Newsರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಶೀತ ಗಾಳಿ: 5 ಜಿಲ್ಲೆಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಶೀತ ಗಾಳಿ: 5 ಜಿಲ್ಲೆಗೆ ಆರೆಂಜ್ ಅಲರ್ಟ್

ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ಉತ್ತರ ಕರ್ನಾಟಕದ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಶೀತ ಗಾಳಿ ತೀವ್ರವಾಗಿರುವ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಾಧಾರಣ ಶೀತ ಗಾಳಿ ಇರಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಎರಡು ದಿನ ಕನಿಷ್ಠ ಉಷ್ಣಾಂಶದಲ್ಲಿ ವಾಡಿಕೆಗಿಂತ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆಯಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular