ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಅಲ್ಲೋಲಕಲ್ಲೋಲ ಸೃಷ್ಟಿ ಮಾಡಿದೆ.
ಓಡಿಶಾದ್ಯಂತ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳು, ತೆಲಂಗಾಣದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಕಟ್ಟೆಚ್ಚರ ಘೋಷಿಸಲಾಗಿದೆ. ಮಹಾರಷ್ಟ್ರ ಭಾಗದಲ್ಲಿಯೂ ವರುಣಾರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಗೋವಾ, ಮಧ್ಯ ಮಹಾರಾಷ್ಟ್ರ ಭಾಗದಲ್ಲಿ ಸೆಪ್ಟೆಂಬರ್ 30ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಛತ್ತೀಸ್ ಗಡದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ನೈಋತ್ಯ ಮಾನ್ಸೂನ್ ದೆಹಲಿ, ಗುಜರಾತ್, ರಾಜಸ್ಥಾನ , ಪಂಜಾಬ್, ಹರಿಯಾಣ, ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡದಿಂದ ಮರಳಿದ್ದು, ಭಾರಿ ಮಳೆಯಾಗಲಿದೆ. ಇನ್ನು ಕರ್ನಾಟಕದ ಉತ್ತರ ಒಳನಾಡಿನ ಭಾಗದಲ್ಲಿ ಮಳೆ ಅಬ್ಬರ ಪ್ರವಾಹ ಭೀತಿ ಉಂಟುಮಾಡಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.