HomeLatest Newsರಾಜ್ಯದ ವಿವಿಧೆಡೆ ಗಾಳಿ ಸಹಿತ ಮಳೆ ಅಬ್ಬರ: ಇಂದೂ ಹಗುರ ಮಳೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಗಾಳಿ ಸಹಿತ ಮಳೆ ಅಬ್ಬರ: ಇಂದೂ ಹಗುರ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮಂಗಳವಾರ ಗಾಳಿ ಸಹಿತ ಮಳೆಯಾಗಿದೆ. ಉತ್ತರ ಕನ್ನಡ, ಚಾಮರಾಜನಗರ, ಮಂಡ್ಯ, ಮೈಸೂರು, ಗದಗ, ರಾಯಚೂರು, ಕೊಡಗು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಕಡಬ, ಬೆಳ್ತಂಗಡಿ, ದಾವಣಗೆರೆ, ಶಿವಮೊಗ್ಗ ಜಿಲ್ಲೆಯ ಕೆಲವು ಕಡೆ ಹಗುರ ಮಳೆಯಾಗಿದೆ.

ಕೆಲವು ಕಡೆ ಚದುರಿದಂತೆ ಮತ್ತೆ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಕಡಬ ತಾಲೂಕಿನಲ್ಲಿ ಗುಡುಗು ಬಿರುಗಾಳಿ ಸಹಿತ ಮಳೆ ಅಬ್ಬರಿಸಿದೆ. ಕಡಬದ ಬಿಳಿನೆಲೆ ಗ್ರಾಮದ ಬಳಿ ಭೀಕರ ಗಾಳಿಗೆ ಅಡಕೆ ಮರಗಳು ನೆಲಕ್ಕುರುಳಿವೆ. ತೇವಾಂಶಭರಿತ ಮೋಡಗಳಿರುವ ಕಾರಣ ರಾಜ್ಯದ ಕೆಲವು ಕಡೆ ಫೆಬ್ರವರಿ 28 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಶುಷ್ಕ ಹವಾಮಾನ ಇದ್ದು ಕೆಲವು ಭಾಗದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ, ಗದಗ, ವಿಜಯಪುರ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಭಾಗದಲ್ಲಿ ಹಗುರ ಮಳೆಯಾಗುವ ಸಂಭವ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular