HomeKarnatakaRain Alert Karnataka : ರಾಜ್ಯಾದ್ಯಂತ ನ.15 ರವರೆಗೆ ಭಾರಿ ಮಳೆ : 'ಹವಾಮಾನ ಇಲಾಖೆ'...

Rain Alert Karnataka : ರಾಜ್ಯಾದ್ಯಂತ ನ.15 ರವರೆಗೆ ಭಾರಿ ಮಳೆ : ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ರಾಜ್ಯಾದ್ಯಂತ ನ.15 ರವರೆಗೆ ಭಾರಿ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹೌದು, ಈಶಾನ್ಯ ಮುಂಗಾರು ಚುರುಕಾಗಿರುವ ಹಿನ್ನೆಲೆ ನವೆಂಬರ್ 15 ರವರೆಗೂ ತಮಿಳುನಾಡು ಹಾಗೂ ಕರ್ನಾಟಕದ ಹಲವು ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಸೇರಿದಂತೆ ಹಲವೆಡೆ ಮಳೆಯಾಗುವ ಸಂಭವವಿದೆ.ಅದೇ ರೀತಿ ಕೊಪ್ಪಳದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular