HomeLatest NewsRAIN ALERT: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ: ಹವಾಮಾನ ಇಲಾಖೆ ಮುನ್ಸೂಚನೆ

RAIN ALERT: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈಗಾಗಲೇ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿಯೂ ವರುಣಾರ್ಭಟ ಹೆಚ್ಚಲಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಒಂದೇ ಸಮನೇ ಮಳೆ ಸುರಿಯುತ್ತಿದ್ದು, ಮುಂದಿನ ಕೆಲ ಗಂಟೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಗಾಳಿಯು ಗಂಟೆಗೆ 30-50 ಕಿ.ಮೀ ವೇಗದಲ್ಲಿ ಬೀಸಲಿದೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಹಾಸನ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಜೋರಾಗಲಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ ವಿಜಯಪುರ, ಹಾವೇರಿ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular