HomeKarnatakaರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ ಮುನ್ಸೂಚನೆ: 9 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ ಮುನ್ಸೂಚನೆ: 9 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ. 9 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ನೈರುತ್ಯ ಮುಂಗಾರು ರಾಜ್ಯದ ಬಹುತೇಕ ಭಾಗದಲ್ಲಿ ಅಬ್ಬರಿಸುತ್ತಿದೆ. ರಾಜ್ಯದಾದ್ಯಂತ ಮುಂದಿನ ನಾಲ್ಕು ದಿನ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 26ರಂದು ಬೀದರ್, ಕಲಬುರಗಿ, ಉಡುಪಿ, ಬೆಳಗಾವಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಹಾಸನ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜುಲೈ 27ರಂದು ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಳಗಾವಿ, ವಿಜಯಪುರ, ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ನಾಲ್ಕು ದಿನ ಬೆಂಗಳೂರು ನಗರ ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular