HomeKarnatakaಗಮನಿಸಿ...! 18 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಗಮನಿಸಿ…! 18 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಒಟ್ಟು 18 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವವಿದ್ದು, ಹವಾಮಾನ ಇಲಾಖೆಯಿಂದ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ 11 ರಿಂದ 20 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ವಿಜಯಪುರ, ರಾಯಚೂರು, ಬಳ್ಳಾರಿ, ಯಾದಗಿರಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ 6ರಿಂದ 11 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆಯಿದ್ದು. ಯೆಲ್ಲೋ ಅಲರ್ಟ್ ನೀಡಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಮುಂಗಾರು ಪ್ರಬಲವಾಗಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಗಂಟೆಗೆ 35 ರಿಂದ 65 ಕಿ.ಮೀ.ವರೆಗೆ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular