HomeKarnatakaRain Alert : ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ :...

Rain Alert : ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ.!

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ತಮಿಳುನಾಡು- ಶ್ರೀಲಂಕಾ ಮಧ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ತಮಿಳುನಾಡಿನಲ್ಲಿ ಭಾರಿ ಮಳೆ ಆಗುತ್ತಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬುಧವಾರ ಮೋಡ ಕವಿದ ವಾತಾವರಣ ಕಂಡು ಬಂದಿದೆ.

ಗುರುವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆ ಆಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶುಕ್ರವಾರ ಹಾಸನ, ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಡಿಸೆಂಬರ್ 16ರ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರ ತೀವ್ರತೆ ಹೆಚ್ಚಿದಲ್ಲಿ ಡಿಸೆಂಬರ್ 17, 18 ರಂದು ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಮಳೆಯಾಗುವ ಸಂಭವವಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular