ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಸೇತುವೆ, ರಸ್ತೆಗಳು ಜಲಾವೃತವಾಗಿದ್ದರೆ ಇನ್ನು ಕೆಲವೆಡೆ ತಾತ್ಕಾಲಿಕ ರಸ್ತೆಗಳೇ ನೀರಿನಲ್ಲಿ ಕೊಚ್ಚಿ ಹೋಗಿವೆ.
ಬೆಳಗಾವಿಯ ಖಾನಾಪುರದಾದ್ಯಂತ ವರುಣಾರ್ಭಟಕ್ಕೆ ಮಲಪ್ರಭಾ ನದಿ ಉಕ್ಕಿ ಹರಿಯ್ತುತ್ತಿದೆ. ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿದೆ ಅಡ್ಡಲಾಗಿ ನಿರ್ಮಿಸಿದ್ದ ತಾತ್ಕಾಲಿಕ ರಸ್ತೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ.
ಇಲ್ಲಿ ಮಲಪ್ರಭಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಪಕ್ಕದಲ್ಲಿ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಲಾಗಿತ್ತು. ಆದರೆ ಭಾರಿ ಮಳೆಯಿಂದ ಮಲಪ್ರಭಾ ನದಿಯಲ್ಲಿ ಒಳಹರಿವು ಹೆಚ್ಚಾಗಿದ್ದು, ನೀರಿನ ರಭಸಕ್ಕೆ ರಸ್ತೆಯೇ ಕೊಚ್ಚಿ ಹೋಗಿದೆ.
ಇದರಿಂದಾಗಿ ಬೆಳಗಾವಿ-ಗೋವಾ ನಡುವೆ ಸಾಂಚಾರ ಸ್ಥಗಿತಗೊಂಡಿದೆ. ಪ್ರಯಾಣಿಕರು, ವಾಹನ ಸವಾರರು ಬೇರೆ ಮಾರ್ಗದಲ್ಲಿ ಗೋವಾ ತೆರಳುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.