HomeKarnatakaBREAKING NEWS: ಬಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ವ್ಯಕ್ತಿ ಸ್ಥಳದಲ್ಲೇ ಸಾವು

BREAKING NEWS: ಬಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ವ್ಯಕ್ತಿ ಸ್ಥಳದಲ್ಲೇ ಸಾವು

ಚಾಮರಾಜನಗರ: ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಇಲ್ಲಿನ ಬಾಗಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಚಂದ್ರ ನಾಯಕ್ ಮೃತ ದುರ್ದೈವಿ. ರಾತ್ರಿ ಮಲಗಿದ್ದ ವೇಳೆ ಮನೆ ಗೋಡೆ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿ ಸಿಲುಕಿ ಚಂದ್ರ ನಾಯಕ್ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಅಂಬುಜಾಕ್ಷಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular