ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನಲ್ಲಿ ನಾಳೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ನೀಡಿ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಜೋಯಿಡಾ, ಸಿದ್ದಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಮೂರು ತಾಲೂಕುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.