HomeLatest Newsರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ: ನಾಳೆಯೂ ಈ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ: ನಾಳೆಯೂ ಈ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಲವೆಡೆ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹಾವೇರಿ

ಹಾವೇರಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಆಗಸ್ಟ್ 20ರಂದು ರಜೆ ಘೋಷಣೆ ಮಾಡಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿರಂತರ ಮಳೆಯ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 20ರಂದು ಹಾವೇರಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಆದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾದಗಿರಿ

ಯಾದಗಿರಿ ಜಿಲ್ಲೆಯಲ್ಲಿಯೂ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ನಾಳೆಯೂ ರಜೆ ನೀಡಲಾಗಿದೆ. ಡಿಡಿಪಿಐ ಚನ್ನಬಸಪ್ಪ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ

ಬೆಳಗಾವಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಆಗಸ್ಟ್ 20ರಂದು ರಜೆ ನೀಡಲಾಗಿದೆ. ಅಂಗನವಾಡಿ, ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular