HomeKarnatakaರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ: ಹಲವೆಡೆ ಸಾವಿರಾರು ಎಕರೆ ಬೆಳೆ ನಾಶ: ರೈತರು ಕಂಗಾಲು

ರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ: ಹಲವೆಡೆ ಸಾವಿರಾರು ಎಕರೆ ಬೆಳೆ ನಾಶ: ರೈತರು ಕಂಗಾಲು

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಡೆದ 4-5 ದಿನಗಳಿಂದ ಭಾರಿ ಮಳೆಯಾದ ಪರಿಣಾಮ ಅವಾಂತರ ಉಂಟಾಗಿದೆ. ಮಳೆಯ ಆರ್ಭಟದಿಂದಾಗಿ ಕಟಾವು ಹಂತಕ್ಕೆ ಬಂದಿದ್ದ ಸಾವಿರಾರು ಎಕರೆ ಬೆಳೆ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಅನೇಕ ಕಡೆಗಳಲ್ಲಿ ಧಾರಾಕಾರ ಮಳೆ ಆದ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ.

ಹಲವಡೆ ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದ ಪರಿಣಾಮ ಹೊಲ, ಗದ್ದೆ, ತೋಟಗಳು ಜಲಾವೃತಗೊಂಡಿವೆ. ಅನೇಕ ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು, ಶಿವಮೊಗ್ಗ, ಚಿತ್ರದುರ್ಗ ಮೊದಲಾದ ಕಡೆ ಮನೆಗಳು ಕುಸಿದಿವೆ.

ಭಾರಿ ಮಳೆ ಕಾರಣ ಅಡಿಕೆ, ಬಾಳೆ, ತೆಂಗು, ಭತ್ತ, ಉದ್ದು, ಈರುಳ್ಳಿ, ಟೊಮೆಟೊ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿವೆ. ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಧಾರವಾಡ, ಗದಗ ಸೇರಿ ಹಲವೆಡೆ ಭಾರಿ ಮಳೆಯಿಂದಾಗಿ ಬೆಳೆ ಹಾಳಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಹಾನಿಯ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular