ಧಾರವಾಡ: ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದೆ. ಮಳೆ ಅಬ್ಬರಕ್ಕೆ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಲಿದ್ದು, ಮುಂಜಾಗೃತಾ ಕ್ರಮವಾಗಿ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳಲ್ಲಿ ಧಾರವಾಡ ಜಿಲ್ಲಾಡಳಿತದ ವತಿಯಿಂದ ತುರ್ತು ಸಹಾಯವಾಣಿ ಆರಂಭಿಸಲಾಗಿದೆ.
ಅತಿವೃಷ್ಟಿ ಹಾಗೂ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜನರಿಗೆ ಅನುಕೂಲ ಕಲ್ಪಿಸುವ ನಿಟ್ತಿನಲ್ಲಿ ಸಹಾಯವಾಣಿ ಆರಂಭಿಸಲಾಗಿದ್ದು, ಧಾರವಾಡದ ಎಲ್ಲ ತಾಲೂಕು ಕೇಂದ್ರ ಸೇರಿ ಜಿಲ್ಲಾಧಿಕಾರಿ ಕಚೇರಿಯಲ್ಲೂ ಸಹಾಯವಾಣಿ ತೆರೆಯಲಾಗಿದೆ. ಮಹಾನಗರ ಪಾಲಿಕೆಯಲ್ಲಿ ವ್ಯಾಪ್ತಿಯಲ್ಲಿಯೂ ಸಹಾಯವಾಣಿ ಆರಂಭಿಸಲಾಗಿದೆ.
ಮಳೆಯಿಂದ ಹಾನಿಗೊಳಗಾದ ಜನರ ಸಹಾಯಕ್ಕಾಗಿ ಆರಂಭಿಸಿದ ಸಹಾಯವಾಣಿ ಕೇಂದ್ರವನ್ನು ಜನರು ಸಂಪರ್ಕಿಸಬಹುದು. ದಿನದ 24 ಗಂಟೆಯೂ ಸಹಾಯವಾಣಿ ಕೇಂದ್ರ ಕಾರ್ಯ ನಿರ್ವಹಿಸಲಿದೆ.
ಮಹಾನಗರ ಪಾಲಿಕೆಯ ಸಹಾಯವಾಣಿ – 0836-2213888, 0836-2213889, 0836-2213869
ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ-0836- 2445508/ಟೋಲ್ ಫ್ರೀ ನಂ: 1077 ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.