HomeLatest NewsBIG NEWS: ವರುಣಾರ್ಭಟಕ್ಕೆ ಧಾರವಾಡದಲ್ಲಿ ಸಾಲು ಸಾಲು ಅವಾಂತರ: ಆಯತಪ್ಪಿ ಬಿದ್ದು ಚರಂಡಿ ನೀರಿನಲ್ಲಿ ಕೊಚ್ಚಿ...

BIG NEWS: ವರುಣಾರ್ಭಟಕ್ಕೆ ಧಾರವಾಡದಲ್ಲಿ ಸಾಲು ಸಾಲು ಅವಾಂತರ: ಆಯತಪ್ಪಿ ಬಿದ್ದು ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ!

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಒಂದೆಡೆ ಬೆಣ್ಣೆಹಳ್ಳ ತುಂಬಿ ಹರಿಯುತ್ತಿದ್ದು, ಮತ್ತೊಂದೆಡೆ ಮಳೆ ಅಬ್ಬರಕ್ಕೆ ಪ್ರವಾಹದಂತೆ ರಸ್ತೆಗಳ ಮೇಲೆ ನೀರು ಹರಿಯುತ್ತಿವೆ.

ಹುಬ್ಬಳ್ಳಿ-ಧಾರವಾಡ ಪ್ರಮುಖ ರಸ್ತೆಗಳು ಜಾಲಾವೃತಗೊಂಡಿವೆ. ಹಲವೆಡೆ ಮನೆ, ಅಂಗಡಿಗಳಿಗೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೆರೆಯಂತದಾದ ರಸ್ತೆಗಳಲ್ಲೇ ಜನರು ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಳೆ ಅಬ್ಬರಕ್ಕೆ ವ್ಯಕ್ತಿಯೊಬ್ಬ ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದು ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ರಸ್ತೆ ಪಕ್ಕದಲ್ಲಿ ಬೋರ್ಗರೆದು ಹರಿಯುತ್ತಿದ್ದ ಚರಂಡಿಗೆ ಆಯತಪ್ಪಿ ಬಿದ್ದ ವ್ಯಕ್ತಿ ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋಗಿದ್ದಾರೆ.

ಕಸಬಾಪೇಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗಲಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಹುಸೇನ ಕಳಸ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಶೋಧ ನಡೆಸಿದ್ದಾರೆ.

ಇನ್ನು ಹುಬ್ಬಳ್ಳಿಯಲ್ಲಿ ಉಣಕಲ್ ಕೆರೆ ತುಂಬಿ ಹರಿಯುತ್ತಿದೆ. ಧಾರವಾಡ ಜಿಲ್ಲೆಯಾಧ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular