
ಸೆ.3 ರಂದು ಇಂದು ಬೀದರ್ , ಕಲಬುರಗಿ, ಹಾಗೂ ಸೆ.4 ರಂದು ನಾಳೆ ಕಲಬುರಗಿ, ಬಾಗಲಕೋಟೆ, ಕೊಪ್ಪಳ ಜಿಲ್ಲೆಯಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅದೇ ರೀತಿ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದೇ ರೀತಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ರಾಮನಗರ ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗ ಸಹಿತ ಭಾರೀ ಮಳೆಯಾಗಿದೆ. ಇಂದು ಸಹ ವರುಣನ ಆರ್ಭಟ ಮುಂದುವರೆಯಲಿದೆಯಂತೆ.

