HomeKarnatakaRain alert Karnataka : ಬೆಂಗಳೂರು ಸೇರಿ ರಾಜ್ಯದ ಹಲವೆಡೆ 3-4 ದಿನ ಭಾರಿ ಮಳೆ...

Rain alert Karnataka : ಬೆಂಗಳೂರು ಸೇರಿ ರಾಜ್ಯದ ಹಲವೆಡೆ 3-4 ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ವಿವಿಧ ಭಾಗಗಳಲ್ಲಿ ಮುಂಗಾರುಪೂರ್ವ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಕ್ಯಾಲೆಂಡರ್ ಪ್ರಕಾರ ಮಾರ್ಚ್ ನಿಂದ ಮೇ ವರೆಗೆ ಮುಂಗಾರು ಪೂರ್ವ ಅವಧಿಯಾಗಿದೆ. ಈ ಅವಧಿಯಲ್ಲಿ ಬಿಸಿಲ ತಾಪಕ್ಕೆ ಮಳೆಯಾಗಲಿದೆ. ಅದೇ ರೀತಿ ವಾತಾವರಣ ಸೃಷ್ಟಿಯಾಗಿದ್ದು, ಮಾರ್ಚ್ 12 ರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ. ಮಂಡ್ಯ, ಮೈಸೂರು, ಕೊಡಗು ಹಾಸನ,ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾರ್ಚ್ 12 ರಿಂದ 14ರ ವರೆಗೆ ಮೂರು ದಿನ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಾರ್ಚ್ 11 ರಿಂದ 14ರವರೆಗೆ ಗುಡುಗು ಸಹಿತ ಹಗುರ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular