HomeLatest NewsRain alert Karnataka : ಇಂದಿನಿಂದ ರಾಜ್ಯಾದ್ಯಂತ ಭಾರಿ 'ಮಳೆ' ಮುನ್ಸೂಚನೆ : ಈ ಜಿಲ್ಲೆಗಳಿಗೆ...

Rain alert Karnataka : ಇಂದಿನಿಂದ ರಾಜ್ಯಾದ್ಯಂತ ಭಾರಿ ‘ಮಳೆ’ ಮುನ್ಸೂಚನೆ : ಈ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆ ರಾಜ್ಯದ ಹಲವು ಕಡೆ ಆಗಸ್ಟ್ 31 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 31 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28 ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

.ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲಿಯೂ ಮಳೆಯಾಗಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular