HomeLatest NewsBREAKING : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ : ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು...

BREAKING : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ : ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ


ಡಿಜಿಟಲ್ ಡೆಸ್ಕ್ : ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಹಾಗೂ ಮಂಗಳೂರು ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಇಂದು ( ಜು.24) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ. ಆದರೆ ಪದವಿ ಕಾಲೇಜಿನ ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.ಮಂಗಳೂರು ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ .

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿಯೂ ವರುಣಾರ್ಭಟ ಹೆಚ್ಚಲಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಒಂದೇ ಸಮನೇ ಮಳೆ ಸುರಿಯುತ್ತಿದ್ದು, ಮುಂದಿನ ಕೆಲ ಗಂಟೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಗಾಳಿಯು ಗಂಟೆಗೆ 30-50 ಕಿ.ಮೀ ವೇಗದಲ್ಲಿ ಬೀಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಹಾಸನ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಜೋರಾಗಲಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular