ಬೆಂಗಳೂರು : ಮುಂದಿನ ಒಂದು ವಾರಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಮತ್ತು ನಾಳೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮೇ 30ರ ವರೆಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ವಿಜಯಪುರ, ಬೀದರ್ ಹಾಗೂ ಕಲಬುರಗಿ ಯಾದಗಿರಿ, ಬಾಗಲಕೋಟೆ, ಗದಗ, ಹಾಸನ, ಕೊಡಗು, ಹಾವೇರಿ ಜಿಲ್ಲೆಗಳಿಗೆ ಮೇ 29 ರವರೆಗೆ ಯೆಲ್ಲೊಅಲರ್ಟ್ ಘೋಷಿಸಲಾಗಿದೆ.
Recorded Maximum Temperature at 1730 Hrs IST of 27th May 2025 #IMD #Weatherupdate #mausam #Heatwave #Temperature #MaximumTemperature #Rajasthan@moesgoi @ndmaindia @DDNational @airnewsalerts pic.twitter.com/pdvvOl2CvA
— India Meteorological Department (@Indiametdept) May 27, 2025