ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಒಂದು ವಾರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ 19 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ. ಹಾವೇರಿ, ಬೀದರ್. ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಆಗಸ್ಟ್ 13ರಿಂದ ವಾಯುಭಾರ ಕುಸಿತವಾಗಲಿದೆ. ಈ ಹಿನ್ನೆಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.
19 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.