Rain alert Karnataka : ರಾಜ್ಯದಲ್ಲಿ ಇನ್ನೂ 2 ದಿನ ಭಾರಿ ‘ಮಳೆ’ ಮುನ್ಸೂಚನೆ : 8 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಇನ್ನೂ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹಾಗೂ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬಾಗಲಕೋಟೆ, , ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ ಜಿಲ್ಲೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ರಾಜ್ಯದಲ್ಲಿ ಗಾಳಿ ವೇಗ 40 ಕಿ.ಮೀ. ಇರುವ ಸಾಧ್ಯತೆ ಇದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಬೆಂಗಳೂರು ಸೇರಿದಂತೆ ಹಲವು ಕಡೆ ಮುಂದಿನ ಮೂರು ದಿನ ಬಹುತೇಕ ಹಗುರ ಕೆಲವೆಡೆ ಜಿಟಿ ಜಿಟಿ ಮಳೆ ಆಗಲಿದೆ. ಇದರಿಂದಾಗಿ ಎಲ್ಲೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಚಳಿ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ನಗರದಲ್ಲಿ ಜುಲೈ 30ರ ತನಕ ಗರಿಷ್ಠ ತಾಪಮಾನ 27ರಿಂದ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ

ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವಿಜಯಪುರ ಹಾಗೂ ಬಾಗಲಕೋಟೆ ಶಾಲಾ ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ.ವಿಜಯಪುರ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಪಿಯು ಕಾಲೇಜಿಗೆ ರಜೆ ನೀಡಿ ಜಿಲ್ಲಾಧಿಕಾರಿ ಭೂ ಭಾಲನ್ ಆದೇಶ ಹೊರಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಎಲ್ಲಾಅಂಗನವಾಡಿ. ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಎಂ ಜಾನಕಿ ಆದೇಶ ಹೊರಡಿಸಿದ್ದಾರೆ. ಜಿಟಿಜಿಟಿ ಮಳೆಯಿಂದ ಶಾಲೆಗಳ ಕಟ್ಟಡಗಳು ಸೋರಿಕೆ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಟ್ಟಡಗಳಲ್ಲಿ ಸೋರಿಕೆ ಬಗ್ಗೆ ಡಿಡಿಪಿಐರಿಂದ ಪತ್ರ ಬರೆದ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಇಂದು ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಎಂ.ಜಾನಕಿ ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read