HomeLatest Newsರಾಜ್ಯದಲ್ಲಿ ಇಂದಿನಿಂದ 3 ದಿನ ಭಾರಿ ಮಳೆ ಮುನ್ಸೂಚನೆ: ಅನೇಕ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರಿ ಮಳೆ ಮುನ್ಸೂಚನೆ: ಅನೇಕ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವ ಇದ್ದು, ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.

ಸೆಪ್ಟೆಂಬರ್ 27ರಂದು ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಸೆಪ್ಟೆಂಬರ್ 28ರಂದು ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆಪ್ಟೆಂಬರ್ 29ರಂದು ಬಾಗಲಕೋಟೆ, ಬೆಳಗಾವಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular