HomeLatest NewsRain alert Karnataka : ರಾಜ್ಯದಲ್ಲಿ 3 ದಿನ ಭಾರಿ ಮಳೆ ಮುನ್ಸೂಚನೆ : ಈ...

Rain alert Karnataka : ರಾಜ್ಯದಲ್ಲಿ 3 ದಿನ ಭಾರಿ ಮಳೆ ಮುನ್ಸೂಚನೆ : ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ.!

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಜೋರಾಗಲಿದ್ದು, 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕೊಡಗು , ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಧಾರವಾಡ ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು. ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ಬೀದರ್, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular