HomeLatest Newsರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ 4 ದಿನ ಭಾರಿ ಮಳೆ ಮುನ್ಸೂಚನೆ: ‘ಆರೆಂಜ್ ಅಲರ್ಟ್’ ಘೋಷಣೆ

ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ 4 ದಿನ ಭಾರಿ ಮಳೆ ಮುನ್ಸೂಚನೆ: ‘ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 21 ರಿಂದ 24ರ ವರೆಗೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 21ರಂದು ಆರೆಂಜ್ ಅಲರ್ಟ್ ನೀಡಲಾಗಿದ್ದು, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 22ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ಕೊಪ್ಪಳ, ಕಲಬುರಗಿ, ರಾಯಚೂರು, ಬೀದರ್, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜುಲೈ 23ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ಮೈಸೂರು, ತುಮಕೂರು, ಶಿವಮೊಗ್ಗ ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular