ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆ ಮಳೆ ಕೊರತೆ ಮುಂದುವರೆದಿದೆ. ಮುಂಗಾರು ದುರ್ಬಲವಾಗಿದ್ದು, ಬಹುತೇಕ ಭಾಗದಲ್ಲಿ ಮೋಡಕವಿದ ವಾತಾವರಣವಿದ್ದರೂ ಮಳೆ ಆಗುತ್ತಿಲ್ಲ.
ಮಲೆನಾಡು, ಕರಾವಳಿ ಹೊರತುಪಡಿಸಿ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಮತ್ತಷ್ಟು ಮಳೆ ಕೊರತೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 10 ರಿಂದ 16 ರವರೆಗೆ ಭಾರೀ ಮಳೆಯಾಗುವ ಸಂಭವವಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ಮೊದಲ ವಾರ ರಾಜ್ಯದ 18 ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇಕಡ 70ರಷ್ಟು ಕಡಿಮೆ ಮಳೆಯಾಗಿದೆ.