HomeLatest Newsಕರಾವಳಿ ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್: ಉಳಿದೆಡೆ ಮೋಡ ಕವಿದರೂ...

ಕರಾವಳಿ ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್: ಉಳಿದೆಡೆ ಮೋಡ ಕವಿದರೂ ಮುಂಗಾರು ದುರ್ಬಲ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆ ಮಳೆ ಕೊರತೆ ಮುಂದುವರೆದಿದೆ. ಮುಂಗಾರು ದುರ್ಬಲವಾಗಿದ್ದು, ಬಹುತೇಕ ಭಾಗದಲ್ಲಿ ಮೋಡಕವಿದ ವಾತಾವರಣವಿದ್ದರೂ ಮಳೆ ಆಗುತ್ತಿಲ್ಲ.

ಮಲೆನಾಡು, ಕರಾವಳಿ ಹೊರತುಪಡಿಸಿ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಮತ್ತಷ್ಟು ಮಳೆ ಕೊರತೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 10 ರಿಂದ 16 ರವರೆಗೆ ಭಾರೀ ಮಳೆಯಾಗುವ ಸಂಭವವಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ಮೊದಲ ವಾರ ರಾಜ್ಯದ 18 ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇಕಡ 70ರಷ್ಟು ಕಡಿಮೆ ಮಳೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular