HomeLatest Newsರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಮಳೆ ಮುನ್ಸೂಚನೆ: ಕರಾವಳಿಗೆ ಆರೆಂಜ್, ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಮಳೆ ಮುನ್ಸೂಚನೆ: ಕರಾವಳಿಗೆ ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಒಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದ್ದು, ಶುಕ್ರವಾರ ಕೂಡ ಭಾರಿ ಮಳೆಯಾಗಿದೆ.

ಮಂಗಳೂರು, ಸುಳ್ಯ, ಉಡುಪಿ, ಸಿದ್ದಾಪುರ, ಕೊಟ್ಟಿಗೆಹಾರ, ಹೊನ್ನಾವರ, ಆಗುಂಬೆ, ಉಪ್ಪಿನಂಗಡಿ, ಕುಂದಾಪುರ, ಕಾರ್ಕಳ, ಗೇರುಸೊಪ್ಪ, ಪುತ್ತೂರು ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ. ಇನ್ನು ಒಂದು ವಾರ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಆಗಸ್ಟ್ 30 ಮತ್ತು 31 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ನಂತರದ ಐದು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಒಳನಾಡಿನ ಧಾರವಾಡ, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆಗಸ್ಟ್ 30ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಸೆಪ್ಟೆಂಬರ್ ತಿಂಗಳಿನಿಂದ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular