ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮೇ 31ರಂದು ಶನಿವಾರ ಕೂಡ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನಿರಂತರ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅವಘಡ ಸಂಭವಿಸಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಮೇ 30 ರಿಂದ ಜೂನ್ 3ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 31 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಸಂಭವ ಹಿನ್ನೆಲೆ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.