ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳೂರು ಉಪವಿಭಾಗದಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಮಂಗಳೂರು, ಉಳ್ಳಾಲ, ಮೂಡಬಿದ್ರೆ, ಬಂಟ್ವಾಳ, ಮುಲ್ಕಿ ತಾಲೂಕಿನ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ಘೋಷಣೆ ಮಾಡಲಾಗಿದೆ.
ಪುತ್ತೂರು ವಿಭಾಗದಲ್ಲಿ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ನೀಡಲಾಗಿದೆ. ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕಿನ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ಮತ್ತು ಐಟಿಐ, ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಆದೇಶಿಸಿದ್ದಾರೆ. ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇರುವುದಿಲ್ಲ.

