ಬೆಂಗಳೂರು: ರಾಜ್ಯದ ವಿವಿಧೆಡೆ ಭಾರಿ ಮಳೆ ಆಗಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.
ಜುಲೈ 31ರಂದು ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಯಲ್ಲಿ, ಆಗಸ್ಟ್ 1ರಂದು ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಯ ಒಂದೆರಡು ಕಡೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜುಲೈ 31 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ,
ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆ ಗಂಟೆಗೆ 30- 40 ಕಿ.ಮೀ. ವೇಗದ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 40- 50 ಕಿ.ಮೀ. ವೇಗದ ಗಾಳಿ ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಅದೇ ರೀತಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ 40 – 50 ಕಿ.ಮೀ. ವೇಗದ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.

