HomeLatest News'ಮೋಂಥಾ' ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 3 ಜಿಲ್ಲೆಗೆ ‘ಆರೆಂಜ್’, 9 ಜಿಲ್ಲೆಗಳಿಗೆ...

‘ಮೋಂಥಾ’ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 3 ಜಿಲ್ಲೆಗೆ ‘ಆರೆಂಜ್’, 9 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’: 100 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೋಂಥಾ ಚಂಡಮಾರುತ ಪರಿಣಾಮ ರಾಜ್ಯದ ಹಲವೆಡೆ ಅಕ್ಟೋಬರ್ 29 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಗದಗ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಮೈಸೂರಿನಲ್ಲಿ ಅಕ್ಟೋಬರ್ 28ರಂದು, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಅಕ್ಟೋಬರ್ 29ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡ, ಯಾದಗಿರಿ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧೆಡೆ ಮಳೆಯಾಗಿದೆ. ಚಂಡಮಾರುತದಿಂದ ತಾಪಮಾನ ಕುಸಿತವಾಗಿ ಚಳಿಯ ಅನುಭವವಾಗುತ್ತಿದೆ. ಮಂಗಳವಾರದ ವೇಳೆಗೆ ಚಂಡಮಾರುತ ಬಲಗೊಳ್ಳುವ ಸಾಧ್ಯತೆಯಿದ್ದು, ಆಂಧ್ರಪ್ರದೇಶ ಕರಾವಳಿ ದಾಟಲಿದೆ. ಗಂಟೆಗೆ 100 ಕಿ.ಮೀ. ವೇಗದವರೆಗೂ ಗಾಳಿ ಬೀಸಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular