ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಏಪ್ರಿಲ್ 20, 21 ರಂದು ಆಲಿಕಲ್ಲು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಏಪ್ರಿಲ್ 24 ರಿಂದ 26 ರವರೆಗೆ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ. ನಂತರ ಒಂದು ವಾರ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದ್ದು, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಕಲ್ಲು ಜಿಲ್ಲೆಯ ಕೆಲವು ಕಡೆ ಗುಡಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಮತ್ತು ಉತ್ತರಗಳ ನಾಡಿನ ಅನೇಕ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಸೋಮವಾರ ಮತ್ತು ಮಂಗಳವಾರ 10ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.