HomeKarnatakaರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 5 ಜಿಲ್ಲೆಗೆ ಆರೆಂಜ್, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 5 ಜಿಲ್ಲೆಗೆ ಆರೆಂಜ್, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಶನಿವಾರ ಕೂಡ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಭಾರಿ ಮಳೆಯಾಗುವ ಸಂಭವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಜೂನ್ 11ರ ವರೆಗೆ ರಾಜ್ಯದ ಕರಾವಳಿ ಪ್ರದೇಶ ಮತ್ತು ಒಳನಾಡಿನ ಕೆಲವೆಡೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶುಕ್ರವಾರ ಕೂಡ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸಿದ್ದು, ಬೆಂಗಳೂರಿನಲ್ಲಿ ಶನಿವಾರ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular