ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಜು. 24 ರಿಂದ 26ರ ವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಇದೇ ಅವಧಿಯಲ್ಲಿ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜುಲೈ 24ರಂದು ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜುಲೈ 25ರಂದು ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಕೊಡಗು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಜುಲೈ 26ರಂದು ಮಲೆನಾಡಿನ ಎಲ್ಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಾವಣಗೆರೆ, ಮೈಸೂರು, ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಅವಧಿಯಲ್ಲಿ ಗಾಳಿಯ ವೇಗ ಹೆಚ್ಚಾಗಿರುತ್ತದೆ ಎಂದು ಹೇಳಲಾಗಿದೆ.