HomeLatest Newsರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಕರಾವಳಿಗೆ ರೆಡ್ ಅಲರ್ಟ್, ಒಳನಾಡು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಕರಾವಳಿಗೆ ರೆಡ್ ಅಲರ್ಟ್, ಒಳನಾಡು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಜು. 24 ರಿಂದ 26ರ ವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಇದೇ ಅವಧಿಯಲ್ಲಿ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜುಲೈ 24ರಂದು ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 25ರಂದು ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಕೊಡಗು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಜುಲೈ 26ರಂದು ಮಲೆನಾಡಿನ ಎಲ್ಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಾವಣಗೆರೆ, ಮೈಸೂರು, ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಅವಧಿಯಲ್ಲಿ ಗಾಳಿಯ ವೇಗ ಹೆಚ್ಚಾಗಿರುತ್ತದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular