ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಕೊರತೆ ನಡುವೆಯೇ ವಾರಾಂತ್ಯದಲ್ಲಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 18ರಂದು ಕರಾವಳಿ ಮತ್ತು ಮಲೆನಾಡಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತಗ್ಗು ಪ್ರದೇಶಗಳು ಜಲಾವೃತವಾಗುವ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಸಂಭವ ಇದ್ದು ಸಾರ್ವಜನಿಕರು ಎಚ್ಚರಿಕೆ ವಹಿಸಲು ತಿಳಿಸಲಾಗಿದೆ.
ಕೊಡಗು, ಹಾಸನ, ಬೆಳಗಾವಿ, ಧಾರವಾಡ, ಬೆಂಗಳೂರು ನಗರ. ಹಾವೇರಿ ಸೇರಿದಂತೆ ಆರು ಜಿಲ್ಲೆಗಳಿಗೆ ಯೆಲ್ಲೋ ಅನರ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಮತ್ತು ಕೆಲವು ಕಡೆ ಭಾರಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

