HomeLatest Newsರಾಜ್ಯದಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ: 4 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಣೆ

ರಾಜ್ಯದಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ: 4 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ಶುಕ್ರವಾರ ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ 24 ಗಂಟೆಗಳಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಮಳೆಯೊಂದಿಗೆ ಗಂಟೆಗೆ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಮಿಂಚಿನ ಅಬ್ಬರದೊಂದಿಗೆ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಹಗುರ ಮಳೆಯಾಗಲಿದೆ. ಕಲಬುರಗಿ, ವಿಜಯಪುರ ಭಾಗದಲ್ಲಿ ಗಾಳಿ ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದ್ದು ಕರಾವಳಿ ಜಿಲ್ಲೆಗಳಲ್ಲಿಯೂ ಇದೇ ವಾತಾವರಣ ಇರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುರುವಾರ ಬೆಂಗಳೂರು, ಬಾಳೆಹೊನ್ನೂರು, ಗೌರಿಬಿದನೂರು, ಕೃಷ್ಣರಾಜಸಾಗರ, ಕೆಆರ್ ಪೇಟೆ ಸೇರಿದಂತೆ ಹಲವು ಕಡೆ ಮಳೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular