HomeLatest Newsರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್'

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ನಾಲ್ಕು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ಅಕ್ಟೋಬರ್ 26 ರಿಂದ 29 ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.

ಅಕ್ಟೋಬರ್ 28ರಂದು ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಶನಿವಾರ ಮಳೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular