HomeIndiaBIG NEWS: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ; 9 ವರ್ಷದ ಬಾಲಕಿ ದುರ್ಮರಣ

BIG NEWS: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ; 9 ವರ್ಷದ ಬಾಲಕಿ ದುರ್ಮರಣ

ಚೆನ್ನೈ: ಅಕಾಲಿಕ ಮಳೆಯಿಂದಾಗಿ ಮನೆಗೋಡೆ ಕುಸಿದು ಬಿದ್ದ ಪರಿಣಾಮ ಓರ್ವ ಬಾಲಕಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವಾರೂರಿನಲ್ಲಿ ನಡೆದಿದೆ.

ಮೊನಿಷಾ (9) ಮೃತ ಬಾಲಕಿ. ಮೊನಿಷಾ ಸಹೋದರ ಮೋಹನ್ ದಾಸ್ ಗಂಭೀರವಾಗಿ ಗಾಯಗೊಂಡು ತಿರುವರೂರು ಸರ್ಕಾರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಾಗಿದ್ದಾನೆ.

ತಮಿಳುನಾಡಿನ ಹಲವೆಡೆಗಳಲ್ಲಿ ಭಾರಿ ಮಳೆಯಾಗುತಿದ್ದು, ಚೆನ್ನೈ, ತಿರುವರೂರು ಸೆರಿದಂತೆ ಹಲವು ಪ್ರದೇಶಗಳಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ತಿರುವರೂರು ಜಿಲ್ಲೆಯ ನನ್ನಿಲಂ, ಕುಡವಾಸಲ್, ವಲಂಗೈಮನ್, ಮನ್ನಾರ್ಕುಡಿ, ನೀಡಮಂಗಲಂಗಳಲ್ಲಿ ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಲ್ಲುಪುರಂ, ಕಡಲೂರು, ತಿರುವಾರೂರು, ಚಂಗಲ್ಪಟ್ಟು, ಕಲ್ಲಕುರಿಚಿ, ತಿರುವಣ್ಣಾಮಲೈ ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular