HomeKarnatakaRain alert Karnataka : ರಾಜ್ಯದ 12 ಜಿಲ್ಲೆಗಳಲ್ಲಿ ಅ.20 ರವರೆಗೆ ಭಾರಿ ಮಳೆ :...

Rain alert Karnataka : ರಾಜ್ಯದ 12 ಜಿಲ್ಲೆಗಳಲ್ಲಿ ಅ.20 ರವರೆಗೆ ಭಾರಿ ಮಳೆ : ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ.!

ರಾಜ್ಯದ 12 ಜಿಲ್ಲೆಗಳಲ್ಲಿ ಅ.20 ರವರೆಗೆ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಕ್ಟೋಬರ್ 20 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ,ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಅ.17ರವರೆಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವೆಡೆ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯದಲ್ಲಿ ಹಾಗೂ ರಾಮನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಎರಡು ಮೂರು ದಿನಗಳಲ್ಲಿ ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶಗಳಲ್ಲಿಯೂ ವಾಯುಭಾರ ಕುಸಿತವಾಗಲಿದೆ ಎಂದು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular