HomeKarnatakaBREAKING : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ ; ವಾಹನ ಸವಾರರ ಪರದಾಟ |Rain...

BREAKING : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ ; ವಾಹನ ಸವಾರರ ಪರದಾಟ |Rain in Bengaluru

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ದಿಢೀರನೆ ಸುರಿದ ಭಾರಿ ಮಳೆಗೆ ನಗರದ ಹಲವು ಪ್ರಮುಖ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಮತ್ತು ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಹೈರಾಣಾಗಿದ್ದಾರೆ.

ನಗರದ ಮಧ್ಯಭಾಗ ಹಾಗೂ ಸುತ್ತಮುತ್ತಲಿನ ಪ್ರಮುಖ ಬಡಾವಣೆಗಳಲ್ಲಿ ವರುಣನ ಅಬ್ಬರ ಜೋರಾಗಿದ್ದು, ಕೆಳಗಿನ ಪ್ರದೇಶಗಳು ಜಲಾವೃತಗೊಂಡಿವೆ:

ಮೆಜೆಸ್ಟಿಕ್ ಮತ್ತು ಕೆ.ಆರ್. ಮಾರ್ಕೆಟ್, ಟೌನ್ ಹಾಲ್, ಕಾರ್ಪೊರೇಷನ್ , ಶಾಂತಿನಗರಮತ್ತು ವಸಂತನಗರ. ರಾಜಾಜಿನಗರ ಮತ್ತು ನಂದಿನಿ ಲೇಔಟ್, ವಿಜಯನಗರ ಮತ್ತು ಸುಬ್ರಮಣ್ಯನಗರ/ನಾಗರಬಾವಿ, ಗಿರಿನಗರ, ಬಸವನಗುಡಿ, ಜಯನಗರ ಮತ್ತು ಬನಶಂಕರಿ, ಲಗ್ಗೆರೆ, ಹೆಬ್ಬಾಳ, ಯಲಹಂಕ, ಬನಶಂಕರಿ, ಕೋಣನಕುಂಟೆಯಲ್ಲಿ ಭಾರಿ ಮಳೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುನ್ನೆಚ್ಚರಿಕೆ ಕ್ರಮ: ಕೆ.ಆರ್. ಸರ್ಕಲ್ ಅಂಡರ್ ಪಾಸ್ ಕ್ಲೋಸ್

ಹಿಂದಿನ ಕರಾಳ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಬಿಬಿಎಂಪಿ ಹಾಗೂ ಸಂಚಾರಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಕೆ.ಆರ್. ಸರ್ಕಲ್ ಅಂಡರ್ ಪಾಸ್ ಅನ್ನು ಬ್ಯಾರಿಕೇಡ್ ಅಳವಡಿಸಿ ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ. ಮಳೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಅಂಡರ್‌ಪಾಸ್‌ನಲ್ಲಿ ಅಪಾಯದ ಮಟ್ಟ ಮೀರಿ ನೀರು ತುಂಬಿಕೊಳ್ಳಲು ಪ್ರಾರಂಭಿಸಿದ ತಕ್ಷಣವೇ ಈ ನಿರ್ಧಾರ ಕೈಗೊಳ್ಳಲಾಗಿದೆ. ನಗರದ ಹಲವು ಅಂಡರ್‌ಪಾಸ್‌ಗಳು ಮತ್ತು ತಗ್ಗು ಪ್ರದೇಶಗಳಲ್ಲಿ ನೀರು ನಿಂತಿರುವುದರಿಂದ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಲು ಹಾಗೂ ಜಾಗರೂಕರಾಗಿ ಚಲಿಸಲು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular