HomeKarnatakaರಾಜ್ಯದಲ್ಲಿ ಇಂದು, ನಾಳೆ ಭಾರಿ ಮಳೆ: 3 ದಿನದ ನಂತರ ಮುಂಗಾರು ದುರ್ಬಲ

ರಾಜ್ಯದಲ್ಲಿ ಇಂದು, ನಾಳೆ ಭಾರಿ ಮಳೆ: 3 ದಿನದ ನಂತರ ಮುಂಗಾರು ದುರ್ಬಲ

ಬೆಂಗಳೂರು: ರಾಜ್ಯದ ವಿವಿಧೆಡೆ ಮುಂಗಾರು ಮಳೆ ಚುರುಕು ಪಡೆದಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಕೇಂದ್ರ ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಎರಡು ಮೂರು ದಿನಗಳ ನಂತರ ಮುಂಗಾರು ದುರ್ಬಲವಾಗಲಿದೆ ಎಂದು ಹೇಳಲಾಗಿದೆ.

ಜುಲೈ 7 ರಂದು ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕಲಬುರಗಿ, ಧಾರವಾಡ, ಗದಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉಳಿದಂತೆ ಸಾಧಾರಣ ಮಳೆಯ ನಿರೀಕ್ಷೆ ಇರುವ ಉತ್ತರ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಯಾದಗಿರಿ, ಬೀದರ್, ಕೊಪ್ಪಳ, ಬಳ್ಳಾರಿ ವಿಜಯನಗರ, ಚಿತ್ರದುರ್ಗ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 8ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ರಾಯಚೂರು, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಿಕ್ಕಬಳ್ಳಾಪುರ, ಜಿಲ್ಲೆಗಳಿಗೆ ಆರೆಂಜ್ ನೀಡಲಾಗಿದೆ, ಮುನ್ಸೂಚನೆಯ ಪ್ರಕಾರ ಮುಂದಿನ ಎರಡು ಮೂರು ದಿನ ಮಾತ್ರ ಉತ್ತಮ ಮಳೆಯಾಗಿದೆ, ನಂತರ ಮುಂಗಾರು ಮತ್ತೆ ದುರ್ಬಲವಾಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular