HomeKarnatakaಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ

ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಜನವರಿ 10 ರಂದು ಬುಧವಾರ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಗದಗ, ಕೊಪ್ಪಳ, ರಾಯಚೂರು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ.

ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಗುಡುಗು ಸಹಿತ 7 ಸೆಂ.ಮೀ.ಗಿಂತ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಮಂಗಳವಾರ ಸುಳ್ಯ, ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ಸೇರಿ ಹಲವೆಡೆ ಮಳೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular