HomeKarnatakaಮುಂದಿನ ಎರಡು ಗಂಟೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಮುಂದಿನ ಎರಡು ಗಂಟೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಮುಂದಿನ ಎರಡು ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ದಾವಣಗೆರೆ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 30-40ಕಿ.ಮೀ ಇರಲಿದೆ.

ಕೆಲ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಉತ್ತರ ಕನ್ನದ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನ, ಧಾರವಾಡ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular