ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 26ರ ವರೆಗೆ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮೈಸೂರು ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ವಿಜಯನಗರ, ಯಾದಗಿರಿ ಜಿಲ್ಲೆಯ ಕೆಲವು ಕಡೆ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಲ್ಲಿ ಜೂನ್ 27 ರಿಂದ 29, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್ 24 ರಿಂದ 29 ರವರೆಗೆ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 24 ರಿಂದ 26ರವರೆಗೆ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಜನರು ಮುನ್ನೆಚ್ಚರಿಕೆ ವಹಿಸಲು ಕೋರಿದೆ.

