HomeKarnatakaBIG NEWS: ಮಳೆ ಅಬ್ಬರ: ಧರೆಗುರುಳಿದ ಮರಗಳು; ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್

BIG NEWS: ಮಳೆ ಅಬ್ಬರ: ಧರೆಗುರುಳಿದ ಮರಗಳು; ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್

ಚಿಕ್ಕಮಗಳೂರು: ಕರಾವಳಿ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿವೆ.

ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ, ಬಿರುಗಾಳಿ ಬೀಸುತ್ತಿದ್ದು ಹಲವೆಡೆ ಮರಗಳು ಧರೆಗುರುಳಿವೆ. ಬೃಹತ್ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿಬಿದ್ದ ಪರಿಣಾಮ ಚಿಕ್ಕಮಗಳೂರು- ಮಂಗಳೂರು ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.

ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಮರ ಬಿದ್ದ ಪರಿಣಾಮ ಈ ಭಾಗದಲ್ಲಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಕನ್ನಡ ಜಿಲ್ಲೆಯ ಜೋಕಟ್ಟೆ ಬಳಿ ಮನೆ ಪಕ್ಕದ ತಡೆಗೋಡೆ ಕುಸಿದುಬಿದ್ದ ಪರಿಣಾಮ 17 ವರ್ಷದ ಯುವಕ ಶೈಲೇಶ್ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಮನೆಯ ಮೇಲೆ ಮರಗಳು ಬಿದ್ದಿದ್ದು, ಅವಾಂತರ ಸೃಷ್ಟಿಯಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular